ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಬೈ: ಬಹುಮಡಿ ಕಟ್ಟದಲ್ಲಿ ಅಗ್ನಿ ಅವಘಡ: 19ನೇ ಅಂತಸ್ತಿನಿಂದ ಬಿದ್ದು ವ್ಯಕ್ತಿ ಸಾವು

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನ ಅವಿಘ್ನ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು 30 ವರ್ಷದ ಅರುಣ್​ ತಿವಾರಿ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕಾ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ 60 ಮಹಡಿಯ ಕಟ್ಟಡದ ಅಪಾರ್ಟ್‌ಮೆಂಟ್‌ನ 19ನೇ ಅಂತಸ್ತಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡ ಬಾಲ್ಕನಿಯಿಂದ ಜಿಗಿದ ಅರುಣ್​ ತಿವಾರಿ ಸಾವನ್ನಪ್ಪಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುವುದು ಇನ್ನು ತಿಳಿದುಬರಬೇಕಿದೆ.

Edited By : Vijay Kumar
PublicNext

PublicNext

22/10/2021 03:35 pm

Cinque Terre

66.61 K

Cinque Terre

2

ಸಂಬಂಧಿತ ಸುದ್ದಿ