ಬೆಂಗಳೂರು: ವಿಮಾನದಲ್ಲಿ ಬಂದು ಲಾಡ್ಜ್ನಲ್ಲೇ ತಂಗಿ ಎಟಿಎಂಗೆ ಕನ್ನ ಹಾಕುತ್ತಿದ್ದ ಇಬ್ಬರು ಖದೀಮರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಭಾರತ ಮೂಲದ ಸಮರ್ಜಿತ್ ಸಿಂಗ್ ಮತ್ತು ರಾಜ್ಕುಮಾರ್ ಬಂಧಿತ ಆರೋಪಿಗಳು. ಇವರಿಬ್ಬರನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದು, ಓಯೊ ಆ್ಯಪ್ ಮೂಲಕ ಲಾಡ್ಜ್ನಲ್ಲಿ ನೆಲೆಸುತ್ತಿದ್ದರು. ಬಳಿಕ ನಗರದಲ್ಲಿನ ಎಟಿಎಂಗಳಿಗೆ ನುಗ್ಗಿ ಗ್ಯಾಸ್ ಕಟ್ಟರ್ ಬಳಸಿ ಕಳ್ಳತನ ಮಾಡುತ್ತಿದ್ದರು.
ಆರೋಪಿಗಳು ಇತ್ತೀಚೆಗೆ ಬೆಂಗಳೂರಿನ ಉತ್ತರಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಕಿ 17 ಲಕ್ಷ ರೂ. ಎಗರಿಸಿದ್ದರು. ಬಂಧಿತರ ವಿರುದ್ಧ ಬ್ಯಾಟರಾಯನಪುರ, ಪೀಣ್ಯ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ. ಸದ್ಯ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇವರಿಬ್ಬರನ್ನು ಪೊಲೀಸರು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
24/10/2021 07:52 am