ಕಲಬುರಗಿ: ಮಹಿಳೆಯೊಬ್ಬರು ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು, ಈ ಪೈಕಿ ಓರ್ವ ಬಾಲಕಿ ಮಾತ್ರ ಬದುಕುಳಿದ ಘಟನೆ ಜಿಲ್ಲೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತರು. ಇನ್ನೋರ್ವ ಬಾಲಕಿ ಈಶ್ವರಿ (4) ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಲಕ್ಷ್ಮಿ ಅವರಿಗೆ ಪತಿ ಹಾಗೂ ಆತನ ಮನೆಯವರ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ ಲಕ್ಷ್ಮಿ ಮಾಡ್ಯಾಳ ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಬಾವಿಗೆ ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
24/10/2021 01:53 pm