ಗಾಂಧಿನಗರ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ಬಿಎಸ್‌ಎಫ್ ಕಾನ್‌ಸ್ಟೆಬಲ್ ಮೊಹಮ್ಮದ್ ಸಜ್ಜದ್‌ನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಬಂಧಿಸಲಾಗಿದೆ.
"ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ನಿವಾಸಿಯಾಗಿದ್ದ ಮೊಹಮ್ಮದ್ ಸಜ್ಜದ್ ಬಿಎಸ್‌ಎಫ್ ಸೇರುವ ಮುನ್ನ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಯೇ 46 ದಿನಗಳ ಕಾಲ ನೆಲೆಸಿದ್ದ. ಬಿಎಸ್‌ಎಫ್ ಸೇರಿದ ಬಳಿಕ ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ" ಎಂದು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ.
PublicNext
25/10/2021 07:59 pm