ಮಡಿಕೇರಿ: ಪ್ರವಾಸಕ್ಕೆಂದು ಮಡಿಕೇರಿಗೆ ಬಂದು ಹೋಂಸ್ಟೇಯಲ್ಲಿ ತಂಗಿದ್ದ ಬಳ್ಳಾರಿ ತೋರಣಗಲ್ಲು ನಿವಾಸಿ ವಿಘ್ನೇಶ್ವರಿ (24) ಮೃತಪಟ್ಟಿದ್ದಾರೆ. ಇಲ್ಲಿನ ಡೇರಿ ಫಾರಂ ಬಳಿಯ ಕೂರ್ಗ್ ವ್ಯಾಲಿ ವ್ಯೂ ಹೋಂಸ್ಟೇಯಲ್ಲಿ ವಾಸ್ತವ್ಯ ಮಾಡಿದ್ದ ಯುವತಿ ಸ್ನಾನಕ್ಕೆ ತೆರಳಿದ್ದಾಗ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮುಂಬೈನಲ್ಲಿ ಉದ್ಯೋಗದಲ್ಲಿದ್ದ ನಾಲ್ವರು ಸ್ನೇಹಿತೆಯರು. ಎರಡು ದಿನಗಳ ಹಿಂದೆ ಮಡಿಕೇರಿಗೆ ಬಂದಿದ್ದರು. ಭಾನುವಾರ ರಾತ್ರಿ ಸ್ನಾನಕ್ಕೆ ತೆರಳಿದ್ದ ವಿಘ್ನೇಶ್ವರಿ ಕೊಠಡಿಯಿಂದ ಹೊರಬಾರದಿದ್ದಾಗ ಅನುಮಾನಗೊಂಡ ಸ್ನೇಹಿತೆಯರು ಬಾಗಿಲು ತೆರೆದು ನೋಡಿದಾಗ ವಿಘ್ನೇಶ್ವರಿ ಕುಸಿದು ಬಿದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದರು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಗ್ಯಾಸ್ ಗೀಸರ್ ನಿಂದ ಕಾರ್ಬನ್ ಸೋರಿಕೆಯಾಗಿ ಈ ಘಟನೆ ಸಂಭವಿಸಿರಬಹುದೆಂದು ಅಂದಾಜಿಸಲಾಗಿದ್ದು, ಆ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
26/10/2021 02:05 pm