ಬೆಂಗಳೂರು: ನಕಲಿ ನೋಟುಗಳನ್ನ ಜೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್‌ನ 7 ಜನ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಈ ನಟೋರಿಯಸ್‌ಗಳು ನಿಷೇಧಿತ ಒಂದು ಸಾವಿರ ರೂಪಾಯಿ ಮುಖ ಬೆಲೆಯ ನೋಟನ್ನು ಜೆರಾಕ್ಸ್ ಮಾಡಿ ವಂಚಿಸಲು ಯತ್ನಿಸುತ್ತಿದ್ದರು. ಬಂಧಿತರಿಂದ 6 ಕೋಟಿ ಮೌಲ್ಯದ ನಕಲಿ ನೋಟುಗಳು ವಶಪಡಿಸಿಕೊಳ್ಳಲಾಗಿದೆ.
ಬ್ಲಾಕ್ ಅಂಡ್ ವೈಟ್ ದಂಧೆ ನಡೆಸಲು ಸಂಚು ನಡೆಸುತ್ತಿದ್ದ ಇವರು ನಿಷೇಧಿತ ನೋಟುಗಳ ಬದಲಾವಣೆ ಮಾಡುತ್ತೇವೆಂದು ಮೋಸ ಮಾಡುತ್ತಿದ್ದರು ಜತೆಗೆ 75 ಲಕ್ಷ ನಿಷೇಧಿತ ಅಸಲಿ ನೋಟುಗಳನ್ನು ಕೂಡ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಮೊದಲಿಗೆ 35 ಲಕ್ಷ ನಿಷೇಧಿತ ನೋಟುಗಳನ್ನು ತಂದು ಬ್ಲಾಕ್ ಅಂಡ್ ವೈಟ್ ಮಾಡಲು ಇವರು ಯತ್ನಿಸಿದ್ದಾರೆ. ಈ ವೇಳೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ 1 ಸಾವಿರ ಹಾಗೂ 500 ಮುಖಬೆಲೆಯ 70 ಲಕ್ಷ ನಿಷೇಧಿತ ನೋಟುಗಳು ಸಿಕ್ಕಿವೆ.
ಆರೋಪಿಗಳನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಪೊಲೀಸರಿಗೆ ಶಾಕ್ ಆಗುವಂತಹ ಮಾಹಿತಿಗಳು ಬಹಿರಂಗವಾಗಿದೆ. ಅದೇನಂದರೆ ಆರೋಪಿಗಳ ಜಾಡು ಹಿಡಿದು ಹೋದ ಪೊಲೀಸರಿಗೆ 6 ಕೋಟಿ ಜೆರಾಕ್ಸ್ ನೋಟುಗಳು ಅಲ್ಲದೇ 16 ಮೂಟೆ ಪೇಪರ್‌ಗಳು ಕಾಸರಗೋಡುನಲ್ಲಿ ಸಿಕ್ಕಿದೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
26/10/2021 07:58 pm