ಗದಗ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾರಮ್ಮ ಮುದ್ಲಾಪುರ (43) ಎಂಬುವವರೇ ಮೃತ ಮಹಿಳೆ. ಇವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಶವದ ಸ್ಥಿತಿ ನೋಡಿದರೆ ಹೊಲದಲ್ಲಿ ಅತ್ಯಾಚಾರ ಎಸಗಿ ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೂಡಿದೆ. ಪೆಠಾಲೂರ ರಸ್ತೆ ನಲ್ಲಿರುವ ಜಮೀನಿನಲ್ಲಿ ನಡೆದ ದುರ್ಘಟನೆ ನಡೆದಿದ್ದು ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ತನಿಖೆ ಶುರು ಹಚ್ಚಿಕೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
26/10/2021 10:54 pm