ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಡಿ.ಕೆ.ಶಿವಕುಮಾರ ಆಪ್ತನ ಮನೆ ಮೇಲೆ ಐಟಿ ದಾಳಿ

ಧಾರವಾಡ: ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರ ಆಪ್ತರಾದ ಧಾರವಾಡದಲ್ಲಿರುವ ಯು.ಬಿ.ಶೆಟ್ಟಿ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಗೋವಾದಿಂದ ಬಂದ ಐದು ಜನ ಐಟಿ ಅಧಿಕಾರಿಗಳು ಶೆಟ್ಟಿ ಅವರಿಗೆ ಶಾಕ್ ನೀಡಿದ್ದಾರೆ. ಯು.ಬಿ.ಶೆಟ್ಟಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದವರು.

ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಶೆಟ್ಟಿ ಅವರು ಐಷಾರಾಮಿ ಮನೆ ಹೊಂದಿದ್ದಾರೆ. ಶೆಟ್ಟಿ ಅವರು ಬೆಂಗಳೂರು, ಬೈಂದೂರು, ಕಲಬುರ್ಗಿ ಮತ್ತು ಇತರ ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ.

Edited By : Shivu K
PublicNext

PublicNext

28/10/2021 12:06 pm

Cinque Terre

76.55 K

Cinque Terre

7