ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಜಮೀನು ಜಗಳದಲ್ಲಿ ಮಾರಕಾಸ್ತ್ರಗಳಿಂದ ಮಾರಾಮಾರಿ

ದಾವಣಗೆರೆ: ಜಮೀನು ವಿವಾದ ಎರಡು ಗ್ರಾಮಗಳ ನಡುವೆ ಮಾರಾಮಾರಿ ನಡೆದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಕಂಚಿಕೊಪ್ಪ ಹಾಗೂ ಹೊನ್ನಾಳಿ ತಾಲೂಕಿನ ತುಗ್ಗಲಹಳ್ಳಿ ಗ್ರಾಮಗಳ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದ್ದು ಎರಡೂ ಗುಂಪಿನವರು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.

ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಜಮೀನನಲ್ಲಿ ಉಳುಮೆ ಮಾಡುತ್ತಿದ್ದಾರೆ. ಸರ್ವೇ ನಂಬರ್ 29- 30 ರಲ್ಲಿ ಒಟ್ಟು 40 ಎಕರೆ ಭೂಮಿಯಲ್ಲಿ ದಲಿತ ಕುಟುಂಬಗಳು ಉಳುಮೆ ಮಾಡಿಕೊಂಡು ಬಂದಿವೆ. ಸಾಗುವಳಿ ಚೀಟಿ, ಪಹಣಿ ಕೂಡ ನೀಡಲಾಗಿದ್ದು, ಈ ಜಮೀನು ಖಾತೆ ಮಾಡಿಕೊಡುವಂತೆ ಕಂಚಿಕೊಪ್ಪದ ದಲಿತ ಕುಟುಂಬಗಳ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಆದರೆ ಇದಕ್ಕೆ ತುಗ್ಗಲಹಳ್ಳಿ ಗ್ರಾಮದ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ತುಗ್ಗಲಹಳ್ಳಿ ಗ್ರಾಮಸ್ಥರು ಈ ಜಮೀನು ತಮಗೆ ಸೇರಿದ್ದು ಎಂದು ವಾದಿಸಿದ್ದಾರೆ. ಇದೇ ಕಾರಣಕ್ಕೆ ಮಾತಿಗೆ ಮಾತಿ ಬೆಳೆದು ಮಾರಾಮಾರಿ ನಡೆದಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರ ಹಲ್ಲೆ ಮಾಡಲಾಗಿದೆ.

ಸಿನಿಮೀಯ ರೀತಿ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗುತ್ತಿದೆ. ಕಂಚಿಕೊಪ್ಪದ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಸಿಪಿಐ ದೇವರಾಜ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಹಲ್ಲೆಗೊಳಗಾದವರಿಂದ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತುಗ್ಗಲಹಳ್ಳಿ ಗ್ರಾಮದ ಇಬ್ಬರನ್ನು ಬಂಧಿಸಿದ್ದಾರೆ.

Edited By : Nagesh Gaonkar
PublicNext

PublicNext

28/10/2021 10:59 pm

Cinque Terre

89.99 K

Cinque Terre

0

ಸಂಬಂಧಿತ ಸುದ್ದಿ