ಸೂರತ್ : ತೈಲ್ ದರ ಏರಿಕೆಯ ಮಧ್ಯೆ ಯುವಕರಿಬ್ಬರು ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡ ಬಳಿಕ ಬಂಕ್ ಮೇಲೆ ಪಟಾಕಿ ಹಚ್ಚಿ ಎಸೆದಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪೆಟ್ರೋಲ್ ಬಂಕ್ ಗೆ ಬೆಂಕಿ ಹಚ್ಚಲು ಪಟಾಕಿಯನ್ನು ಹೊತ್ತಿಸಿ ಎಸೆದಿದ್ದಾನೆ. ಪೆಟ್ರೋಲ್ ಬಂಕ್ ನ ಸಿಬ್ಬಂದಿ ಎಚ್ಚೆತ್ತುಕೊಳ್ಳದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಗುಜರಾತ್ ರಾಜ್ಯದ ಸೂರತ್ ಪಿಪ್ಲಾಡ್ ಪ್ರದೇಶದ ಪೆಟ್ರೋಲ್ ಪಂಪ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.
ಈ ಘಟನೆಯ ನಂತರ ಪೆಟ್ರೋಲ್ ಪಂಪ್ ಮ್ಯಾನೇಜರ್ ಮೋತಿಲಾಲ್ ಚೌಧರಿ ಯುವಕನ ವಿರುದ್ಧ ಉಮ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) 285, 286, 336, 114 ಸೆಕ್ಷನ್ಗಳ ಅಡಿಯಲ್ಲಿ ಸಾರ್ವಜನಿಕ ಜೀವನಕ್ಕೆ ಹಾನಿ ಮಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಮೊಹಮ್ಮದ್ ಇರ್ಫಾನ್ ಖುರೇಷಿ ಎಂದು ಗುರುತಿಸಲಾಗಿದೆ.
PublicNext
03/11/2021 08:05 pm