ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲ್ಲೂಕಿನ ವೆಂಕಟಾಪುರದಲ್ಲಿ ಇಂದು ನಡೆದಿದೆ.
ಮರೆಪ್ಪ ನಂದಿಹಳ್ಳಿ (38) ಮೃತ ರೈತ. ಮರೆಪ್ಪ ಅವರು ಎಂದಿನಂತೆ ಇಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರಿಗೆ ನಾಗರ ಹಾವು ಕಚ್ಚಿದ್ದು, ಕೂಡಲೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮರೆಪ್ಪ ಮೃತಪಟ್ಟಿದ್ದಾರೆ. ಈ ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
05/11/2021 07:34 pm