ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಮೃತ ಯುವಕ. ಶಿಕಾರಿಪುರ ಪಟ್ಟಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಇದನ್ನು ವೀಕ್ಷಿಸಲು ಬಂದಿದ್ದ ಯುವಕ ರಾಕೇಶ್‍ನಿಗೆ ಸ್ಪರ್ಧೆಯಲ್ಲಿದ್ದ ಹೋರಿಯೊಂದು ಹಿಂಬದಿಯಿಂದ ತಿವಿದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಯುವಕ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

07/11/2021 10:01 pm

Cinque Terre

45.71 K

Cinque Terre

2