ಶಿವಮೊಗ್ಗ: ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.
ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದು, ಅವರನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಅಗ್ನಿ ಅವಘಡವು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಂದಿಸಿದೆ.
PublicNext
07/11/2021 11:17 pm