ಪಾಟ್ನಾ: ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸ್ ಅಧಿಕಾರಿಯನ್ನೇ ಥಳಿಸಿದ ಕಂಬಕ್ಕೆ ಕಟ್ಟಿದ ಘಟನೆ ಬಿಹಾರದ ಮೋತಿಹಾರಿಯಲ್ಲಿ ನಡೆದಿದೆ.
ಹೌದು. ದೀಪಾವಳಿ ದಿನದಂದು ಪೊಲೀಸ್ ಅಧಿಕಾರಿಯೊಬ್ಬರು ಮೋತಿಹಾರಿಯಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿನ ಜನರ ಗುಂಪೊಂದು ಪೊಲೀಸ್ ಅಧಿಕಾರಿಯನ್ನು ಥಳಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.
ಜನರ ಗುಂಪು ಪೊಲೀಸ್ ಅಧಿಕಾರಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಜೊತೆಗೆ ವ್ಯಕ್ತಿಯೋರ್ವ, 'ದಾಳಿ ನಡೆಸಲು ಯಾರು ಹೇಳಿದರು ಎಂಬುದನ್ನು ಬಹಿರಂಗಪಡಿಸಿ' ಎಂದು ಪೊಲೀಸ್ ಅಧಿಕಾರಿಗೆ ಒತ್ತಾಯಿಸಿದ್ದನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.
PublicNext
08/11/2021 05:35 pm