ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಂದ ಪ್ರೇರಣೆಗೊಂಡು ಸಾವಿರಾರು ಅಭಿಮಾನಿಗಳು ನೇತ್ರದಾನ ಮಾಡಲು ಮುಂದಾಗಿದ್ದಾರೆ. ಹತ್ತಿರದ ಕಣ್ಣಿನ ಆಸ್ಪತ್ರೆಗೆ ತೆರಳಿ ನೇತ್ರದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ಅದರಂತೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೂಡ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ನಟ ಪುನೀತ್ ರಾಜ್ ಕುಮಾರ್ ಅವರಿಂದ ಪ್ರೇರಣೆಗೊಂಡು ನಮ್ಮ ಕುಟುಂಬದ 68 ಸದಸ್ಯರು ನೇತ್ರದಾನ ಮಾಡಲು ನಿರ್ಧರಿಸಿದ್ದೇವೆ ಎಂದರು. ದೇಹ ಮಣ್ಣಲ್ಲಿ ಸೇರುವ ಬದಲು ನಾಲ್ಕು ಜನರಿಗೆ ಉಪಯೋಗವಾಗಬೇಕು. ಅಪ್ಪುವಿನ ಪ್ರೇರಣೆಯಿಂದ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು. ನಮ್ಮದು ಅವಿಭಕ್ತ ಕುಟುಂಬ.ನಮ್ಮ ಕುಟುಂಬದ 68 ಸದಸ್ಯರು ನೇತ್ರದಾನ ಮಾಡುತ್ತೇವೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
PublicNext
09/11/2021 10:40 am