ಬಾಗಲಕೋಟೆ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರ ಬಂಧನವಾಗಿದೆ. ಬಂಧಿತರಿಂದ 1 ಲಕ್ಷ 63 ಸಾವಿರ ನಗದು,8 ಮೊಬೈಲ್,2 ಬೈಕ್ ವಶಪಡಿಸಿಕೊಳ್ಳಲಾಗಿದೆ.
ಜಮಖಂಡಿ ನಗರದಲ್ಲಿ ಮೂವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಎಸ್ ಪಿ ಮಾರ್ಗದರ್ಶನದಲ್ಲಿ ಸಿಇಎನ್ ಸಿಪಿಐ ಮಲ್ಲಯ್ಯ ಮಠಪತಿ ನೇತೃತ್ವದ ತಂಡ ದಾಳಿ ನಡೆಸಿದೆ.ಜಮಖಂಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
PublicNext
10/11/2021 10:48 pm