ಜಿಲ್ಲೆಯ ಮುಧೋಳ ತಾಲೂಕಿನ ತಿಮ್ಮಾಪೂರ ಗ್ರಾಮದ ಬಳಿಯ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ನಡೆಸುತ್ತಿದ್ದು ಹಣ ದುರ್ಬಳಕೆ ಮಾಡುತ್ತಿದೆ ಎಂಬ ಆರೋಪದ ಮೇಲೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.
ಸಚಿವ ಗೋವಿಂದ ಕಾರಜೋಳ ಆಪ್ತ, ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೆವಾಡ ವಿರುದ್ಧ ಎಫ್ ಐ ಆರ್ ದಾಖಲಿಸಲು ಆದೇಶ ಹೊರಡಿಸಲಾಗಿದೆ.
ಡಿಸಿಸಿ ಬ್ಯಾಂಕ್ ನಿಂದ 12 ಕೋಟಿ ಸಾಲ ಪಡೆದು ದುರ್ಬಳಕೆ ಮಾಡಿಕೊಂಡಿದ್ದ ಆಡಳಿತ ಮಂಡಳಿಯ ವಿರುದ್ಧ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೂರು ನೀಡಿ ಮೂರು ತಿಂಗಳಾಗಿದ್ರು ಎಫ್ ಐ ಆರ್ ದಾಖಲು ಮಾಡಿರಲಿಲ್ಲ.ಇದೀಗ ಖಾಸಗಿ ದೂರಿನ ಆಧಾರದಲ್ಲಿ ಎಫ್ ಐ ಆರ್ ದಾಖಲಿಸುವಂತೆ ಸಿ ಜೆ ಎಂ ಕೋರ್ಟ್ ಆದೇಶಿಸಿದೆ.
PublicNext
12/11/2021 01:52 pm