ಗುವಾಹಟಿ: ಮಣಿಪುರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದು, ಈ ದಾಳಿಯಲ್ಲಿ ಸೇನಾ ಕರ್ನಲ್ ವಿಪ್ಲವ್ ತ್ರಿಪಾಠಿ, ಅವರ ಪತ್ನಿ, 8 ವರ್ಷದ ಪುತ್ರ ಹಾಗೂ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.
ಮಣಿಪುರದ ಮಯನ್ಮಾರ್ ಗಡಿಯ ಸಿಂಘಾತ್‌ನಲ್ಲಿ ಇಂದು ಬೆಳಿಗ್ಗೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಬೆಹಿಯಾಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮಣಿಪುರ ಮೂಲದ ಪೀಪಲ್ಸ್ ಲಿಬರೇಶನ್ ಆರ್ಮಿ ದಾಳಿಯ ಹಿಂದೆ ಇರಬಹುದೆಂದು ಅಂದಾಜಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಈ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಮಣಿಪುರದ ಚುರಾಚಂದ್‌ಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ನಡೆದ ಹೇಡಿತನದ ದಾಳಿ. ಇದು ಅತ್ಯಂತ ನೋವಿನ ಮತ್ತು ಖಂಡನೀಯವಾಗಿದೆ ದೇಶವು CO 46 AR ಮತ್ತು ಇಬ್ಬರು ಕುಟುಂಬ ಸದಸ್ಯರನ್ನು ಒಳಗೊಂಡಂತೆ 5 ವೀರ ಸೈನಿಕರನ್ನು ಕಳೆದುಕೊಂಡಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
PublicNext
13/11/2021 08:50 pm