ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾವೋಯಿಸ್ಟ್) ಸಂಘಟನೆಯ 26 ಮಂದಿ ನಕ್ಸಲರನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ಈಶಾನ್ಯ ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯಲ್ಲಿ ಮಾವೋವಾದಿಗಳ ಗುಂಪಿನ ಮೇಲೆ ಪೊಲೀಸರು ಇಂದು ದಾಳಿ ನಡೆಸಿದ್ದರು. ಈ ವೇಳೆ ಮಾವೋವಾದಿ ಗುಂಪು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 26 ನಕ್ಸಲರು ಹತರಾಗಿದ್ದಾರೆ. ನಾಲ್ವರು ಪೊಲೀಸರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
PublicNext
13/11/2021 10:57 pm