ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.

ಸೈಯ್ಯದ್ ( 10) ಅಶ್ರಫ್ ( 07 ) ಹಾಗೂ ಆಸಿಫ್ ( 05 )ಮೃತ ಬಾಲಕರು ಎಂದು ಗುರುತಿಸಲಾಗಿದೆ.‌ ಮೂವರು ಬಾಲಕರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಬಳಿಕ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತ ಬಾಲಕರ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಸುದ್ದಿ ತಿಳಿಯುತ್ತಿದ್ದಂತೆ ಮೃತರ ಮನೆಗೆ ತೆರಳಿದ ಜಗಳೂರು ಶಾಸಕ ಎಸ್. ವಿ. ರಾಮಚಂದ್ರಪ್ಪ ಅವರು ಬಾಲಕರ ಪೋಷಕರಿಗೆ ಸಾಂತ್ವನ ಹೇಳಿದರು‌. ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ನೀಡಿದರು.

Edited By : Shivu K
PublicNext

PublicNext

14/11/2021 07:08 pm

Cinque Terre

59.95 K

Cinque Terre

1

ಸಂಬಂಧಿತ ಸುದ್ದಿ