ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆಗೆ ಗೋಡೆ ಕುಸಿದು ಗರ್ಭಿಣಿ ಸೇರಿ ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಾರೋಬಯ್ಯನಹಟ್ಟಿಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮನೆಯೊಂದರ ಶಿಥಿಲಗೊಂಡಿದ್ದ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಚನ್ನಕೇಶವ (26) ಹಾಗೂ ಅವರ ಪತ್ನಿ ಸೌಮ್ಯ (20) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮನೆಯ ಯಜಮಾನ ಕ್ಯಾಸಣ್ಣ (55) ಚಿಕಿತ್ಸೆಗೆ ಸ್ಪಂದಿಸದೇ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ಬೆಳಗಿನ ಜಾವ ಮನೆಯ ಗೋಡೆ ಕುಸಿದುಬಿದ್ದಿದೆ. ಗೋಡೆ ಬಿದ್ದ ಶಬ್ದ ಕೇಳಿದ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸುವ ವೇಳೆಗೆ ದಂಪತಿ ಮೃತಪಟ್ಟಿದ್ದರು. ಮತ್ತೊಂದು ಬದಿಯಲ್ಲಿ ಮಲಗಿದ್ದ ಕ್ಯಾಸಪ್ಪನ ಪತ್ನಿ ಪಾರಾಗಿದ್ದಾರೆ. ಸೌಮ್ಯ ಹಾಗೂ ಚನ್ನಕೇಶವ ಒಂಬತ್ತು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸೌಮ್ಯ ಮೂರು ತಿಂಗಳ ಗರ್ಭಿಣಿ.

Edited By : Vijay Kumar
PublicNext

PublicNext

15/11/2021 08:07 am

Cinque Terre

26.58 K

Cinque Terre

1

ಸಂಬಂಧಿತ ಸುದ್ದಿ