ಬೆಂಗಳೂರು:ನೆಲಮಂಗಲದ ಪ್ರತಿಷ್ಠಿತ ಕಾಲೇಜು ಎದುರುಗಡೆನೇ ಕಾಲೇಜು ವಿದ್ಯಾರ್ಥಿನಿ ಮೇಲೆ ಪುಂಡನೊಬ್ಬ ಹಲ್ಲೆ ಮಾಡಿದ ಘಟನೆ ಈಗ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ಪುಂಡರ ಹಾವಳಿ ಜಾಸ್ತಿ ಆಗಿದೆ. ಇಲ್ಲಿಯ ಕಾಲೇಜು ವಿದ್ಯಾರ್ಥಿನಿ ಮೇಲೆ ಪುಂಡನೊಬ್ಬ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿನಿಯ ಕುತ್ತಿಗೆ ಹಿಡಿದು ಎಳೆದು ಕಪಾಳಕ್ಕೂ ಹೊಡೆದಿದ್ದಾನೆ. ನೆಲಮಂಗಲದ ಟೌನ್ ವ್ಯಾಪ್ತಿಯಲ್ಲಿ ಅಕ್ಟೋಬರ್-29 ರಂದು ಈ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ವೀಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ಘಟನೆಯನ್ನ ಸ್ಥಳೀಯರು ತೀವ್ರವಾಗಿಯೇ ಖಂಡಿಸಿದ್ದಾರೆ.ಪೊಲೀಸರಿಗೂ ತಿಳಿಸಿದ್ದಾರೆ. ಆದರೂ ಏನು ಪ್ರಯೋಜನವಾಗಿಯೇ ಇಲ್ಲ ಎನ್ನಲಾಗುತ್ತಿದೆ.
PublicNext
16/11/2021 02:02 pm