ನವದೆಹಲಿ: ಸೇನಾ ಸಿಬ್ಬಂದಿ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಂದ ಲಂಚ ಪಡೆದ ಆರೋಪದ ಮೇಲೆ ಇಬ್ಬರು ಹವಾಲ್ದಾರರನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಿಬಿಐ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ಪುಣೆಯ ಸೇನಾ ಸದರ್ನ್ ಕಮಾಂಡ್‌ಗೆ ಸುಳಿವು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡು ಹವಾಲ್ದಾರರಾಗಿರುವ ಇಬ್ಬರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಶಸ್ತ್ರಾಸ್ತ್ರ ಡಿಪೋದಲ್ಲಿ ಸಿಬ್ಬಂದಿ ನೇಮಕಾತಿಗಾಗಿ ಪರೀಕ್ಷೆ ನಡೆದಿತ್ತು. ಆರೋಪಿಗಳು ಈ ಶಸ್ತ್ರಾಸ್ತ್ರ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಕರೆ ಮಾಡುತ್ತಿದ್ದರು. ಉತ್ತರ ಪತ್ರಿಕೆಗಳು ಅಪೂರ್ಣವಾಗಿರುವ ಕಾರಣ ನಿಮ್ಮ ನೇಮಕಾತಿಯನ್ನು ರದ್ದುಗೊಳಿಸಲಾಗುವುದು ಎಂಬುದಾಗಿ ಅವರಿಗೆ ಬೆದರಿಕೆ ಹಾಕುತ್ತಿದ್ದ ಅವರು, ಹಣ ನೀಡಿದರೆ ನೇಮಕಾತಿ ಪತ್ರ ರವಾನಿಸುವುದಾಗಿ ಭರವಸೆ ನೀಡುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
PublicNext
17/11/2021 05:03 pm