ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸಾಗುತ್ತಿದೆ ಸರಗಳ್ಳತನ. ನಗರದ ನಾಗರಬಾವಿ 9ನೇ ವಿಭಾಗ ಎರಡನೇಹಂತ ಮಲೆ ಮಹಾದೇಶ್ವರ ಬಡಾವಣೆಯ ಒಂದನೇ ಸಿ ಮುಖ್ಯರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಗೆ ಕೈ ಹಾಕಿದ ಖದೀಮರು ಸರ ಎಗರಿಸಿ ಎಸ್ಕೇಪ್ ಆಗಿದ್ದಾರೆ.
ಇನ್ನು ಸರ ಎಳೆದ ರಭಸಕ್ಕೆ ಮಹಿಳೆಯ ಕುತ್ತಿಗೆಯ ಭಾಗದಲ್ಲಿ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ತನಿಖೆಗೆ ಮುಂದಾಗಿರುವ ಪೊಲೀಸರು ಸರಗಳ್ಳರಿಗಾಗಿ ಬಲೆ ಬೀಸಿದ್ದಾರೆ.
PublicNext
18/11/2021 09:44 am