ಬೆಂಗಳೂರು: ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಆಕಸ್ಮಿಕ ಸಂಭವಿಸಿ ಹೊತ್ತಿ ಉರಿದ ಘಟನೆ ಇಟ್ಟಮಡು ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಬೆಂಕಿ ನಂದಿಸಲು ಮುಂದಾಗಿದ್ದ ಅಗ್ನಿಶಾಮಕ ದಳದ ಮೂವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕವಾಗಿದೆ.
ಬೆಂಕಿಯು ತಡರಾತ್ರಿ 2.19ರ ಸುಮಾರಿಗೆ ಕಾರಿನಲ್ಲಿ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದ ಸ್ಥಳೀಯರು ಹಾಗೂ ಮನೆಯವರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸಿಲಿಂಡರ್ ಅಗ್ನಿಶಾಮಕ ಸಿಬ್ಬಂದಿ ಕಣ್ಣೇದುರೆ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯಲ್ಲಿ ಅಗ್ನಿಶಾಮಕ ದಳದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯಿಂದಾಗಿ ಮನೆಗೂ ಕೂಡ ಹಾನಿಯಾಗಿದ್ದು, ಮನೆಯ ಕೆಳ ಮಹಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.
PublicNext
18/11/2021 11:25 am