ಜೈಪುರ್: ಜಮೀನು ವಿವಾದದಲ್ಲಿ ಮಹಿಳೆಯೊಬ್ಬರ ಮೇಲೆ ಜೆಸಿಬಿಯಿಂದ ಹಲ್ಲೆಗೆ ಯತ್ನಿಸಿ ದರ್ಪ ತೋರಿದ ಘಟನೆ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕ್ರೌರ್ಯ ಎಸಗಿದವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಬಾರ್ಮರ್ ಜಿಲ್ಲೆಯ ಬೈಟು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಜಮೀನು ವಿವಾದವೇ ಜಗಳ ನಡೆಯಲು ಮುಖ್ಯ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ರಾಜಸ್ಥಾನದ ಬಾರ್ಮರ್‌ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ' ಎಂದು ಎಸ್‌ಪಿ ದೀಪಕ್ ಭಾರ್ಗವ್ ಮಾಹಿತಿ ನೀಡಿದ್ದಾರೆ
PublicNext
19/11/2021 11:56 am