ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಬಸ್‌ ತಪ್ಪಿದ್ದಕ್ಕೆ ವಿದ್ಯಾರ್ಥಿ ನೇಣಿಗೆ ಶರಣು.!

ಭೋಪಾಲ್: ಶಾಲಾ ಬಸ್‌ ತಪ್ಪಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ನಡೆದಿದೆ.

'ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕ ತಪ್ಪದೆ ಶಾಲೆಗೆ ಹೋಗುತ್ತಿದ್ದ. ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು. ಇದರಿಂದ ಬೇಸರಗೊಂಡ ಬಾಲಕ ಮನೆಗೆ ಅಳುತ್ತಾ ವಾಪಸ್ಸಾಗಿದ್ದ. ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ’ ಎಂದು ಕುಟುಂಬದ ಸದಸ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆತ ಓದಿನಲ್ಲಿ ಚುರುಕಾಗಿದ್ದ. ಮನೆಗೆ ಹಿಂತಿರುಗಿದ್ದ ಅವನು ಸಮವಸ್ತ್ರವನ್ನೂ ತೆಗೆದಿರಲಿಲ್ಲ ಎಂದು ಬಾಲಕನ ಚಿಕ್ಕಪ್ಪ ತಿಳಿಸಿದ್ದಾರೆ. ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Edited By : Vijay Kumar
PublicNext

PublicNext

23/11/2021 02:18 pm

Cinque Terre

32.09 K

Cinque Terre

0