ಯಲಹಂಕ: ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ರಾಜಶೇಖರ್ ಕ್ಲಿನಿಕ್ ಮತ್ತು ನಿವಾಸದ ಮೇಲೆ ಇಂದು ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ರಾಜಶೇಖರ್ ಕೊರೊನಾ ಸಮಯದಲ್ಲಿ 3 ಬಿಡಿಎ ಸೈಟ್, 2 ರೆವೆನ್ಯೂ ಸೈಟ್, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 5 ಎಕರೆ ಜಮೀನು ಖರೀದಿದ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಯಲಹಂಕದ ಸಂತೆ ಸರ್ಕಲ್ ಬಳಿಯ ರಾಜಶೇಖರ್ ನಿವಾಸ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆಸ್ತಿ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
PublicNext
24/11/2021 10:19 am