ಹಾಸನ: ಬಾಲಕಿಯೊಬ್ಬಳು ತನ್ನ ತಾಯಿಗೆ ಮೆಸೇಜ್ ಮಾಡಿ ಹಾಸನ ಹೊರವಲಯದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪೂರ್ವಿಕಾ (15) ಆತ್ಮಹತ್ಯೆಗೆ ಶರಣಾದ ಬಾಲಕಿ. ಪೂರ್ವಿಕಾ ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದಳು. 'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ' ಎಂದು ತಾಯಿ ಮೊಬೈಲ್‌ಗೆ ಮೆಸೇಜ್ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೆಸೇಜ್ ನೋಡಿದ ನಂತರ ಮಗಳು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
PublicNext
26/11/2021 02:13 pm