ನರಗುಂದ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಯುವಕರ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಅಜಯ ಅಣ್ಣಿಗೇರಿ, ಮಲ್ಲಿಕಾರ್ಜುನ ಹಿರೇಮಠ, ಸತೀಶ್ ಎಂಬ ಯುವಕರು ಗಾಯಗೊಂಡಿದ್ದಾರೆ. ತಲೆ ಬೆನ್ನು ಕೈಗಳಿಗೆ ಗಂಭೀರ ಗಾಯಗಳಾಗಿದ್ದು ಇವರೆನ್ನೆಲ್ಲ ನರಗುಂದ ತಾಲೂಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಜಿಮ್ ಮುಲ್ಲಾ ಸೇರಿದಂತೆ ಅನೇಕರು ತಲವಾರಿನಿಂದ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
PublicNext
27/11/2021 05:51 pm