ಹಾಸನ: ಹಿಂದೂ ಧರ್ಮದ ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿದ್ದ ಆರೋಪಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯ ಪ್ರಾರ್ಥನಾ ಕೇಂದ್ರದ ಎದುರು ಪ್ರತಿಭಟನೆ ನಡೆಸುವ ವೇಳೆ ಅಲ್ಲಿ ಬಂದ ಕೆಲ ಮಹಿಳೆಯರು ಪ್ರತಿಭಟನಾಕಾರರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.
ನಾವು ಇಲ್ಲಿ ಕೇವಲ ಪ್ರಾರ್ಥನೆ ಮಾಡಲು ಬಂದಿದ್ದೇವೆ ಅದನ್ನು ಕೇಳಲು ನೀವ್ಯಾರು? ಇಲ್ಲಿ ಯಾವುದೇ ಮತಾಂತರ ಪ್ರಕ್ರಿಯೆ ನಡೆದಿಲ್ಲ ಎಂದು ಮಹಿಳೆಯರು ವಾದಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯವರೊಂದಿಗೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬೇಲೂರಿನ ಬಿಕ್ಕೋಡು ರಸ್ತೆಯಲ್ಲಿ ಅನಧಿಕೃತವಾಗಿ ಪ್ರಾರ್ಥನಾ ಕೇಂದ್ರ ತೆರೆದು ಹಿಂದೂ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಪೊಲೀಸರು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
29/11/2021 12:26 pm