ಬೆಂಗಳೂರು: ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅಕ್ಕನ ಮನೆಯಲ್ಲಿ ವಾಸವಿದ್ದು, ಸೋಮವಾರ ಸಹೋದರಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಗಾಯಾಳು ವಿದ್ಯಾರ್ಥಿನಿಯನ್ನು ಕಾಲೇಜು ಆಡಳಿತ ಮಂಡಳಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 2ನೇ ಮಹಡಿಯಿಂದ ಬಿದ್ದ ಪರಿಣಾಮ ಯುವತಿ ಕಾಲು ಹಾಗೂ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
PublicNext
30/11/2021 07:33 pm