ಮೈಸೂರು: ತಮ್ಮ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಜೋಡಿಯು ನದಿಗೆ ಹಾರಿದ್ದನ್ನು ನೋಡಿದ ಅಂಬಿಗರು ಅವರನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ.
ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಅಭಿ(19) ಹಾಗೂ ಇದೇ ಜಿಲ್ಲೆಯ ಹೆಬ್ಬಸೂರು ಗ್ರಾಮದ 17 ವರ್ಷದ ಅಪ್ರಾಪ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಿಯಕರ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಚಾಮರಾಜನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಾಗೂ ಅಭಿ ನಡವೆ ಪ್ರೇಮಾಂಕುರವಾಗಿದೆ. ಈ ವಿಚಾರ ತಿಳಿದ ಪೋಷಕರು ಈ ಜೋಡಿಗೆ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದೆ. ಇದರಿಂದ ನೊಂದ ಪ್ರೇಮಿಗಳು ನಂಜನಗೂಡು ಸಮೀಪದ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾರೆ. ಅಂಬಿಗರು ಈ ಜೋಡಿಯನ್ನು ರಕ್ಷಿಸಿದ್ದು ಸದ್ಯ ಪಾಗಲ್ ಪ್ರೇಮಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/12/2021 10:01 am