ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿಗೇಟು ಜೇನು ಕುರುಬರ ಹಾಡಿ ನಿವಾಸಿ ಯುವಕನೊಬ್ಬನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.
ಕುರುಬರ ಹಾಡಿ ವಾಸಿ ಬಸವ ಎಂಬ ಯುವಕ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಜಮೀನಿನಲ್ಲಿ ಜೋಳ ಕಟಾವು ಮಾಡಿ ಪಕ್ಕದ ಜಮೀನಿಗೆ ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಅರಣ್ಯ ಇಲಾಖೆ ವಾಚ್ ಮನ್ ಸುಬ್ರಮಣಿ ಸೇರಿ ಮೂವರ ಮೇಲೆ ಕೊಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ. ತನ್ನ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾರೆಂದು ಗಾಯಾಳು ಪತ್ನಿ ಪೊಲೀಸರಿಗೆ ಬಸವನ ಪತ್ನಿ ದೂರು ನೀಡಿದ್ದಾರೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.
PublicNext
02/12/2021 04:07 pm