ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಭೀಕರವಾಗಿ ಕೊಲೆಯಾಗಿದ್ದಾನೆ. ಆಲಮೇಲ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕೊಲೆಯಾದ ಪ್ರದೀಪ ಎಂಟಮಾನ ರೌಡಿ ಶೀಟರ್ ಆಗಿದ್ದ. ಹಳೆಯ ದ್ವೇಷಕ್ಕಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಲಾಗಿದ್ದು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಪ್ರದೀಪ ಎಂಟಮಾನ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಆಲಮೇಲ ಪೊಲೀಸರು ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.
PublicNext
03/12/2021 09:25 am