ಕೋಟಾ(ರಾಜಸ್ಥಾನ): ಪತಿಯೊಂದಿಗೆ ದಿನನಿತ್ಯದ ಜಗಳದಿಂದ ಬೇಸತ್ತ ಮಹಿಳೆ ತನ್ನ ಐವರು ಹೆಣ್ಣುಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಿಯಾಹೆಡಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಿವಲಾಲ್ ಬಂಜಾರ ಪತ್ನಿ ಬಾದಾಮಿ ದೇವಿ ಎಂದು ಗುರುತಿಸಲಾಗಿದೆ. ಮಕ್ಕಳಾದ ಸಾವಿತ್ರಿ (14), ಅಂಕಲಿ (8), ಕಾಜಲ್ (6), ಗುಂಜನ್ (4) ಮತ್ತು ಒಂದು ವರ್ಷದ ಅರ್ಚನಾ ಮೃತ ಐವರು ಅಪ್ರಾಪ್ತ ಬಾಲಕಿಯರು.
ಪತಿ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ಗ್ರಾಮಸ್ಥರು ಆರು ಶವಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ಈ ಕ್ರಮ ಕೈಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
05/12/2021 06:06 pm