ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಾವು ಕೊಲೆ- ಇಂಜಿನಿಯರ್ ವಿರುದ್ಧ ದೂರು ದಾಖಲು

ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ನಾಗರ ಹಾವನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ.

ಶಿವಮೊಗ್ಗದ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಮುಂಭಾಗ ಆಂಜನೇಯ ದೇವಸ್ಥಾನವನ್ನು ಡಿಸೆಂಬರ್ 4ರಂದು ಜೆಸಿಬಿಯಿಂದ ನೆಲಸಮ ಮಾಡಲಾಗಿತ್ತು. ಈ ವೇಳೆ ಹಾವೊಂದು ಪ್ರತ್ಯಕ್ಷವಾಗಿ ದೇವಸ್ಥಾನ ತೆರವಿಗೆ ಅಡ್ಡಿಪಡಿಸಿದೆ. ನಂತರ ಜೆಸಿಬಿಯಿಂದ ಹಾವನ್ನು ಹತ್ಯೆ ಮಾಡಲಾಗಿದೆ ಎಂದು ಬಜರಂಗದಳ ಕಾರ್ಯಕರ್ತರು ದೂರಿದ್ದಾರೆ.

ದೇವಸ್ಥಾನ ತೆರವು ಮಾಡಿದ ನಂತರ ಅಂದೇ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹಾವನ್ನು ಸ್ಮಾರ್ಟ್ ಸಿಟಿ ಯೋಜನೆಯವರು ಕೊಂದಿದ್ದಾರೆ ಎಂದು ಪಾಲಿಕೆಯ ಸದಸ್ಯ ರಾಹುಲ್ ಬಿದರೆ, ಆಲ್ಕೊಳದ ಶಂಕರ್ ವಲಯದ ಅರಣ್ಯಾಧಿಕಾರಿಗಳಿಗೆ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯ ಕುಮಾರ್ ವಿರುದ್ಧ ಹಾವು ಕೊಂದಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

Edited By : Vijay Kumar
PublicNext

PublicNext

10/12/2021 07:20 am

Cinque Terre

40.76 K

Cinque Terre

2

ಸಂಬಂಧಿತ ಸುದ್ದಿ