ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸ್ನೇಹಿತರ ನಡುವೆ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯ

ಮೈಸೂರು: ಸ್ನೇಹಿತರ ನಡುವೆ ನಡೆದ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.

ಹೆಚ್‌ಡಿ ಕೋಟೆ ತಾಲ್ಲೂಕು ಕೊತ್ತೆಗಾಲ ಗ್ರಾಮದ ರವಿ ಹಾಗೂ ಬಸವ ಕೊಲೆಯಾದವರು. ಇವರಿಬ್ಬರೂ ಸ್ನೇಹಿತ ಜೊತೆಗೆ ಮೈಸೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರು ಹಾರೆ ಗುದ್ದಲಿಯಿಂದ ಹೊಡೆದು ರವಿ ಹಾಗೂ ಬಸವನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸರಸ್ವತಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವಿ ಹಾಗೂ ಬಸವನ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Edited By : Vijay Kumar
PublicNext

PublicNext

12/12/2021 10:12 am

Cinque Terre

56.74 K

Cinque Terre

0