ಹಾವೇರಿ: ಆಸ್ತಿ ವಿಚಾರಕ್ಕಾಗಿ 98 ವರ್ಷದ ವೃದ್ಧೆಯನ್ನು ಸಂಬಂಧಿಕರು ಮನೆಗೆ ನುಗ್ಗಿ ಕಿಡ್ನ್ಯಾಪ್ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.
ದೇವಕ್ಕ ದುಂಡಣ್ಣನವರ ಅವರನ್ನು ಸಂಬಂಧಿಕರಾದ ಸಂತೋಷ, ಈರಪ್ಪ, ಆದಪ್ಪ, ಪ್ರಕಾಶ ಮತ್ತು ಮಂಜಪ್ಪ ಕಿಡ್ನಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಂತಾನ ಇಲ್ಲದ್ದರಿಂದ ತನ್ನ ಜಮೀನನ್ನು ಮಾಣಿಕಪ್ಪ ದುಂಡಣ್ಣನವರ ಎಂಬುವರಿಗೆ ದೇವಕ್ಕ ಬರೆದು ಕೊಟ್ಟಿದ್ದರು. ದೇವಕ್ಕ ಅವರನ್ನು ಆರೈಕೆ ಮಾಡುತ್ತಿದ್ದ ಮಾಣಿಕಪ್ಪ ಕಳೆದ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಮಾಣಿಕಪ್ಪ ಮೃತಪಟ್ಟಿದ್ದರೂ ಅವರ ಕುಟುಂಬಸ್ಥರು ಹಲವು ವರ್ಷಗಳಿಂದ ದೇವಕ್ಕ ಅವರನ್ನು ನೋಡಿಕೊಳ್ಳುತ್ತಿದ್ದರು.
ಮಾಣಿಕಪ್ಪನ ಮನೆಯವರು ಜಮೀನಿಗೆ ಹೋಗಿದ್ದ ವೇಳೆ ವೃದ್ಧೆಯನ್ನು ಆರೋಪಿಗಳು ಹುಡುಕಾಡಿ ಹೊತ್ತುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ವೃದ್ಧೆಯ ಐವರು ಸಂಬಂಧಿಕರ ವಿರುದ್ಧ ಕೇಸ್ ದಾಖಲಾಗಿದೆ.
PublicNext
15/12/2021 09:22 pm