ಚಿಕ್ಕಬಳ್ಳಾಪುರ: ಇತ್ತೀಚೆಗೆ ಯಾವುದೇ ಒಂದು ಸಮಸ್ಯೆಗೆ ಇಡೀ ಕುಟುಂಬ ಸಾವಿನ ಹಾದಿ ಹಿಡಿಯುತ್ತಿರುವುದು ಖೇದಕರ ಸಂಗತಿ.
ಸದ್ಯ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ಚಿಂತಾಮಣಿ ತಾಲೂಕಿನ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (45), ಹನುಮಕ್ಕ (35) ಹಾಗೂ ಇವರ ಮಕ್ಕಳಾದ ಮನಿರಾಜು (20) ಮತ್ತು 14 ವರ್ಷದ ಮುರಳಿ ವಿಷ ಸೇವಿಸಿದ್ದಾರೆ. ಇದರಲ್ಲಿ ಮುರಳಿ ಮೃತಪಟ್ಟಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ. ಕುಟುಂಬದ ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/12/2021 05:09 pm