ವಿಜಯನಗರ: ತಿಮಿಂಗಲದ ವಾಂತಿ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಒಂದೂವರೇ ಕೋಟಿ ಮೌಲ್ಯದ ಒಂದೂವರೇ ಕೆಜಿ ತಿಮಿಂಗಲ ವಾಂತಿಯನ್ನು ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ ವಶಪಡಿಸಿಕೊಂಡಿದ್ದಾರೆ.
ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ, ಮಹೇಶ್ ಮತ್ತು ವಿಜಯಪುರದ ಶ್ರೀಧರ್ ಬಂಧಿತ ಆರೋಪಿಗಳಾಗಿದ್ದು, ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
23/12/2021 03:26 pm