ರಾಮನಗರ: ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಕೊಲೆ ಮಾಡಿರುವಂತಹ ಘಟನೆ ಚನ್ನಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದಿದೆ.
ಜಯಮ್ಮ(65) ಮೃತ ಮಹಿಳೆ ಜಯಮ್ಮ ಮಗ ಸಿದ್ದರಾಜು ಮೇಲೆ ಕೂಡ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಇಂದು ಮುಂಜಾನೆ 6 ಗಂಟೆ ಸಮಯದಲ್ಲಿ ಓರ್ವ ಅಪರಿಚಿತ ವ್ಯಕ್ತಿ ಇಬ್ಬರ ಮೇಲೆ ಏಕಾಏಕಿ ಹಲ್ಲೆ ಮಾಡಿರುವುದರಿಂದ ಜಯಮ್ಮ ಸಾವನ್ನಪ್ಪಿದ್ದು ಸಿದ್ದರಾಜು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
24/12/2021 10:47 am