ಬೆಳಗಾವಿ: ಕಬ್ಬಿನ ಗದ್ದೆಗೆ ನೀರು ಹಾಯಿಸುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಹಂತಕರು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಣಮಂತ ಭೀಮಶಿ ಜತ್ನಿ (36) ಕೊಲೆಯಾದ ಯುವಕ. ಕಬ್ಬಿನ ಗದ್ದೆಗೆ ಬಾಗಿ ನೀರು ಹಾಯಿಸುವಾಗ ಹಿಂಬದಿಯಿಂದ ಬಂದ ಹಂತಕರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ನಂತರ ಶವವನ್ನು ಕಬ್ಬಿನ ಗದ್ದೆಯಲ್ಲೇ ಎಸೆದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಗೋಕಾಕ್ ಸಿಪಿಐ ಗೋಪಾಲ್ ರಾಠೋಡ್ ಭೇಟಿ ನೀಡಿಪರಿಶೀಲನೆ ನಡೆಸಿದರು.ಹಾಗೂ ಶ್ವಾನದಳದಿಂದ ಶೋಧ ಕಾರ್ಯಾಚರಣೆ ನಡೆದಿದೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರಿಂದ ತನಿಖೆ ಮುಂದುವರೆಸಿದ್ದಾರೆ.
PublicNext
28/12/2021 11:16 am