ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಡಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿ ಪರಾರಿ

ಹಾಸನ: ಮನೆಯ ಬಾಗಿಲು ಮುರಿದು ನೂರು ಗ್ರಾಂ ಚಿನ್ನ ಹಾಗೂ ನಗದು ದೋಚಿ ಖದೀಮರು ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕ್ಯಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಕಾಫಿ ಕೊಯ್ಲಿಗಾಗಿ ವೇದಮೂರ್ತಿ ಎಂಬುವವರು ತೋಟಕ್ಕೆ ತೆರಳಿದ್ದ ವೇಳೆ ಹಾಡಹಗಲೇ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಮರಳಿ ದಾಗ ಖದೀಮರ ಕೈಚಳಕ ಬಯಲಾಗಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
PublicNext

PublicNext

31/12/2021 04:56 pm

Cinque Terre

65.14 K

Cinque Terre

0