ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಸಾಲಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ ರೈತ: ಅನ್ನದಾತನ ಬದುಕು ಮುಳ್ಳಿನ ಹಾದಿ...!

ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗಿದ್ದನ್ನು ಕಂಡ ರೈತ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ದೊಡ್ಡೂರ ಗ್ರಾಮದ ಜಗದೀಶ ಚನ್ನಬಸಪ್ಪ ಬಾಗಲದ (52) ಆತ್ಮಹತ್ಯೆ ಮಾಡಿಕೊಂಡ ರೈತ. ತಮ್ಮ ಹೊಲದಲ್ಲಿ ಕಷ್ಟಪಟ್ಟು ಬೆಳೆ ಬೆಳೆದಿದ್ದು, ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಬೆಳೆ ನಾಶವಾಗಿದ್ದವು. ಬೆಳೆ ಹಾಳಾಗಿದ್ದರಿಂದ ಹಾಗೂ ತಾಲೂಕಿನ ಶಿಗ್ಲಿ ಗ್ರಾಮದ ಕೆನರಾ ಬ್ಯಾಂಕ್ ನಲ್ಲಿ 2 ಲಕ್ಷ 65 ಸಾವಿರ ರೂಪಾಯಿ ಸಾಲ ಮಾಡಿದ್ದ ರೈತ ಮಾನಸಿಕವಾಗಿ ತೀವ್ರ ನೊಂದಿದ್ದರು ಎನ್ನಲಾಗುತ್ತಿದೆ.

ಸಾಲಭಾದೆಯಿಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

05/01/2022 05:04 pm

Cinque Terre

61.16 K

Cinque Terre

0