ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಜರಾತ್‌: ಸೂರತ್‌ನಲ್ಲಿ ರಾಸಾಯನಿಕ ಅನಿಲ ಟ್ಯಾಂಕರ್ ಸ್ಫೋಟ: ಆರು ಕಾರ್ಮಿಕರ ಸಾವು

ಗಾಂಧಿನಗರ(ಗುಜರಾತ್): ಸೂರತ್ ಜಿಲ್ಲೆಯ ಕಾರ್ಖಾನೆಯೊಂದರ ಬಳಿ ನಿಲ್ಲಿಸಲಾಗಿದ್ದ ಅನಿಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಆರು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಅನಿಲ ಟ್ಯಾಂಕರ್‌ನಲ್ಲಿದ್ದ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಮುಂಜಾನೆ 4.25 ರ ಸುಮಾರಿಗೆ ಈ ಘಟನೆ ಕುರಿತಂತೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು ಈ ವೇಳೆ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಮಲಗಿದ್ದ ಹಲವಾರು ಕಾರ್ಮಿಕರಿಗೆ ಉಸಿರುಕಟ್ಟಿದ ಪರಿಣಾಮ 25 ರಿಂದ 26 ಕಾರ್ಮಿಕರು ಪ್ರಜ್ಞಾಹೀನರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ ಮತ್ತು ಐವರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸೂರತ್ ಮುನ್ಸಿಪಲ್ ಕಾರ್ಪೊರೇಶನ್‍ನ ಉಸ್ತುವಾರಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

06/01/2022 01:10 pm

Cinque Terre

36.18 K

Cinque Terre

0