ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಬೈಲ್ ತಂದಳೆಂಬ ಕಾರಣಕ್ಕೆ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿ ಥಳಿತ: ಶಿಕ್ಷಕಿ ಹೇಳಿದ್ದೇನು?

ಮಂಡ್ಯ: ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಮೊಬೈಲ್ ಫೋನ್ ತಂದಳೆಂಬ ಕಾರಣಕ್ಕೆ ಆಕೆಯ ಬಟ್ಟೆ ಬಿಚ್ಚಿಸಿ ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ‌.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಆದ್ರೆ ಈ ಬಗ್ಗೆ ಸ್ಥಳೀಯರೊಬ್ಬರು ಪ್ರಶ್ನೆ ಮಾಡಿದಾಗ ಮುಖ್ಯಶಿಕ್ಷಕಿ ಹೇಳಿದ್ದೇ ಬೇರೆ. ನಾವು ಆ ತರದ್ದು ಏನೂ ಮಾಡಿಲ್ಲ. ನೀವು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ಕೊಟ್ಟು ತನಿಖೆಗೆ ಒತ್ತಾಯಿಸಿ ಎಂದಿದ್ದಾರೆ. ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ.

Edited By : Nagesh Gaonkar
PublicNext

PublicNext

07/01/2022 01:48 pm

Cinque Terre

118.61 K

Cinque Terre

3