ಲಕ್ನೋ: ಒಂಬತ್ತು ವರ್ಷದ ಬಾಲಕಿಯ ಮೇಲೆ 10 ಮತ್ತು 14 ವರ್ಷದ ಇಬ್ಬರು ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಪ್ರಕಾರ, ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಬೇರೆಡೆ ಕರೆದುಕೊಂಡು ಹೋಗಿ ಆರೋಪಿಗಳು ಕೃತ್ಯ ಎಸಗಿದ್ದಾರೆ.
ಈ ಘಟನೆಯು ಕೆಲವು ದಿನಗಳ ಹಿಂದೆ ನಡೆದಿದ್ದು, ಜನವರಿ 5ರಂದು ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
07/01/2022 09:19 pm