ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ್ ಹಾಗೂ ಹಲವು ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಆರೋಪಿಗಳಿಂದಲೇ 50 ಲಕ್ಷ ವಸೂಲಿ ಮಾಡಿ ದೂರು ಕೊಟ್ಟವರಿಗೆ ಅನ್ಯಾಯ ಎಸಗಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಲಾಗಿದೆ ಎನ್ನಲಾದ ದೂರಿನ ವಿಚಾರ ಮುನ್ನೆಲೆಗೆ ಬಂದಿದೆ.
ಕ್ರಷರ್ ಉದ್ಯಮಿ ಸೇರಿ ಹಲವರಿಂದ ತಮಗೆ 3.96 ಕೋಟಿ ವಂಚನೆಯಾಗಿದೆ ಎಂದು ಮಂಜುನಾಥ್ ಎಂಬುವರಿಂದ ದೂರು ಸಲ್ಲಿಕೆಯಾಗಗಿತ್ತು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆಯಾದ ದೂರಿನಲ್ಲಿ 'ನಂಬಿಕೆ ದ್ರೋಹ ಮತ್ತು ವಂಚನೆ ಕೇಸ್‌ನಲ್ಲಿ ನ್ಯಾಯ ಕೊಡಿಸಬೇಕಿದ್ದ ಸಿಐಡಿ ಎಸ್‌ಪಿ ರವಿ ಚನ್ನಣ್ಣವರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಆರೋಪಿಗಳೊಂದಿಗೆ ಕೈ ಜೋಡಿಸಿದ್ದಾರೆ ಎಂದು ಉಲ್ಲೇಖವಾಗಿದೆ ಎಂಬ ಮಾಹಿತಿ ಇದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಆರೋಪಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿರುವ ಹಾಗೂ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಧ್ವನಿಮುದ್ರಿಕೆ ಕೂಡ ನನ್ನ ಬಳಿ ಇದೆ ಎಂಬುದನ್ನು ದೂರುದಾರ ಮಂಜುನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ. ದೂರು ಸಲ್ಲಿಕೆಯಾಗಿ 3 ತಿಂಗಳು ಕಳೆಯುತ್ತ ಬಂದರೂ ಒಳಾಡಳಿತ ಇಲಾಖೆಯು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.
PublicNext
13/01/2022 09:00 pm