ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ತೇರಿನದೊಡ್ಡಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ದಿನವೇ ನೆತ್ತರು ಹರಿದಿದೆ. ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕನಕಪುರ ತಾಲೂಕಿನ ತೇರಿನದೊಡ್ಡಿ ಗ್ರಾಮದ ನಿವಾಸಿ ಜಗದೀಶ್ (26) ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಯುವಕನ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.
ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಯುತ್ತಿದೆ.
PublicNext
16/01/2022 11:20 am